News Karnataka Kannada
Sunday, May 05 2024
ಬೆಳಗಾವಿ

ಸಹಕಾರಿ ಬ್ಯಾಂಕ್‌ಗಳ ಸಾಲ ಬಡ್ಡಿ ಮನ್ನ : ಸಿಎಂ ಘೋಷಣೆ

New Project (37)
Photo Credit : News Kannada

ಬೆಳಗಾವಿ: ಸಹಕಾರಿ ಬ್ಯಾಂಕ್‌ಗಳ ಸಾಲ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿ.15) ಘೋಷಣೆ ಮಾಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಘೋಷಿಸಿದ್ದಾರೆ. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ತಿಳಿಸಿದರು.

ಅಧಿವೇಶನದಲಿ ಇಂದು ಸಿಎಂ ಏನೆಲ್ಲಾ ಘೋಷಣೆಗಳನ್ನು ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

  • ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿ ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚನೆ.
  • ಸಹಕಾರ ಬ್ಯಾಂಕ್ ಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.
  • ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು.
  • ಧಾರವಾಡ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.
  • ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು.
  • ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.
  • ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ.
  • ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಉನ್ನತೀಕರಣ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು