ಬೆಳಗಾವಿ: ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಓರ್ವ ವಿದ್ಯಾರ್ಥಿನಿಗೆ ಟಾಟಾಏಸ್ ಗುದ್ದಿ ಸಾವನಪ್ಪಿದ ಘಟನೆ ನಡೆದಿದೆ.
ಕಿತ್ತೂರು ತಾಲೂಕಿನ ಉಗರಖೋಡ ಗ್ರಾಮದ ಕಾವೇರಿ ಕಾಜಗಾರ (21) ಮೃತ ದುರ್ದೈವಿ ಆಗಿದ್ದಾಳೆ. ಕಿತ್ತೂರು ಹೊರವಲಯದ ದೇಗಾಂವ ಸರ್ಕಾರಿ ಪದವಿ ಕಾಲೇಜಿನಲ್ಲಿ ಕಾವೇರಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಕಾಲೇಜಿಗೆ ಬಂದಿದ್ದ ಯುವತಿ ತರಗತಿ ಮುಗಿಸಿ ಕಿತ್ತೂರು ಕಡೆಗೆ ಕಾಲ್ನಡಿಗೆಯಲ್ಲಿ ಬರುವಾಗ, ಹಿಂಬದಿಯಿಂದ ಬಂದ ಟಾಟಾಏಸ್ ವಾಹನ ವಾಹನ ಡಿಕ್ಕಿ ಹೊಡೆದಿದೆ. ತಕ್ಷಣವೇ ಆಕೆಯನ್ನು ಸ್ಥಳೀಯರು ರಕ್ಷಣೆ ಮಾಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ವಿದ್ಯಾರ್ಥಿನಿ ಕಾವೇರಿ ಮೃತಪಟ್ಟಿದ್ದಾಳೆ. ಆರೋಪಿಯನ್ನು ದೇಗಾಂವ ಗ್ರಾಮದ ಅನಿಲ್ ಚಿವಟಗುಂಡಿ ಎಂದು ಗುರುತಿಸಲಾಗಿದೆ.
ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.