News Karnataka Kannada
Sunday, April 28 2024
ಬೆಳಗಾವಿ

ಬೆಳಗಾವಿ: ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ

Four killed in electrocution at flour mill
Photo Credit : Pixabay

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ  ನಡೆದಿದೆ.

ಮೃತಪಟ್ಟವರನ್ನು ಅಮಿತ್ ದೇಸಾಯಿ(32), ಲತಾ ದೇಸಾಯಿ(27) ಎಂದು ಗುರುತಿಸಲಾಗಿದೆ.

ಬೆಳೆಗೆ ಕ್ರಿಮಿನಾಶಕ ಸಿಂಪಡಿಸುವ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾದ ಪತಿಯನ್ನು ರಕ್ಷಿಸಲು ಹೋಗಿ ಪತ್ನಿಯೂ ಮೃತಪಟ್ಟಿದ್ದಾರೆ. ಈ ಘಟನೆಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು