ಬೆಳಗಾವಿ: ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನವೊಂದು ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಭೀಕರ ರಸ್ತೆ ಅಪಘಾತದಲ್ಲಿ ರೈತ ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ(41) ಉಸಿರು ಚೆಲ್ಲಿದ್ದಾರೆ.
ರೈತ ಟ್ರ್ಯಾಕ್ಟರ್ ನಲ್ಲಿ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದನು. ಈ ವೇಳೆ ಅಪಘಾತ ನಡೆದಿದೆ. ಬೆಳಗಾವಿ ಮಾರ್ಕೆಟ್ ಗೆ ಕೊತ್ತಂಬರಿ ಸೊಪ್ಪು ತೆಗೆದುಕೊಂಡು ಬೆಳಗಾವಿ ಕಡೆಗೆ ಬರುವಾಗ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.
ಅಪಘಾತ ರಭಸಕ್ಕೆ ರೈತನ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಿರೇಬಾಗೇವಾಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.