News Karnataka Kannada
Monday, April 29 2024
ಬೆಳಗಾವಿ

ಸಾಲಮನ್ನಾ ಆಸೆಗೆ ರೈತರು ಬರ ಬರಲಿ ಎನ್ನುತ್ತಾರೆ: ಮತ್ತೆ ದರ್ಪದ ಮಾತನಾಡಿದ ಸಚಿವ

Farmers want loan waiver to come: Minister
Photo Credit :

ಚಿಕ್ಕೋಡಿ: ರೈತರ ಕುರಿತು ಸಚಿವ ಶಿವಾನಂದ ಪಾಟೀಲ್ ​​ ಮತ್ತೆ ಉಡಾಫೆ ಮಾತುಗಳನ್ನು ಆಡಿದ್ದಾರೆ. ಪದೇ ಪದೆ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಕೃಷ್ಣಾ ನದಿ ನೀರು ಪುಕ್ಸಟ್ಟೆ ಇದೆ, ಕರೆಂಟ್‌ ಕೂಡ ಪುಕ್ಸಟ್ಟೆ ಇದೆ. ಬಹಳಷ್ಟು ಮುಖ್ಯಮಂತ್ರಿಗಳು ಬಿತ್ತನೆ ಬೀಜ ಕೊಟ್ಟರು, ಗೊಬ್ಬರನೂ ಕೊಟ್ಟರು. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ರೈತರ ವಿಚಾರದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ.

ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ವಿವಿಧೋದ್ದೇಶ ಸಹಕಾರಿ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಹಿಂದಿನ ಸರ್ಕಾರಗಳು ಸಾಲಮನ್ನಾ ಮಾಡಿವೆ. ಆದರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ರೈತರ ಸಾಲಮನ್ನ ಕಷ್ಟ ಸಾಧ್ಯ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು