News Karnataka Kannada
Monday, April 22 2024
Cricket
ಬೆಳಗಾವಿ

ಕಾಮಕುಮಾರನಂದಿ ಮುನಿ ಹತ್ಯೆ: ಆರೋಪಿಗಳು ಪೊಲೀಸ್‌ ವಶಕ್ಕೆ

Kamakumaranandi Muni murder accused taken into police custody
Photo Credit : News Kannada

ಚಿಕ್ಕೋಡಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಂಗಳವಾರ​ ಆದೇಶ ನೀಡಿದೆ. ಒಂದನೇ ಆರೋಪಿ ನಾರಾಯಣ ಮಾಳಿ, ಎರಡನೇ ಆರೋಪಿ ಹಸನ್ ​​ಸಾಬ್ ಅನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ.

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದ ಅರೋಪಿಗಳನ್ನು ಚಿಕ್ಕೋಡಿ ಠಾಣೆ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್​, ಡಿವೈಎಸ್​ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಮುನಿ ಕೊಲೆಗೈದು ಗೋಣಿ ಚೀಲದಲ್ಲಿ ಕಟ್ಟಿದ್ದರು: ಜೈನಮುನಿಗಳ ಡೈರಿಯನ್ನು ಆರೋಪಿಗಳು ಸುಟ್ಟು ಹಾಕಿದ್ದಾಗಿ ಪ್ರಾಥಮಿಕ ತನಿಖೆ ವೇಳೆ ಮಾಹಿತಿ ದೊರೆತಿದೆ. ಈ ಕುರಿತು ವಿಚಾರಣೆ ವೇಳೆ ಆರೋಪಿಗಳೇ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಮುನಿಯನ್ನು ಕೊಲೆಗೈದು ಶವವನ್ನು ಗೋಣಿಚೀಲದಲ್ಲಿ ಕಟ್ಟಿ ಬೈಕ್​ನಲ್ಲಿ ಸಾಗಿಸಲಾಗಿತ್ತು. ಜೈನಮುನಿ ಶವದ ಜತೆ ಡೈರಿ ತೆಗೆದುಕೊಂಡು ಹೋಗಿದ್ದ ಆರೋಪಿಗಳು, ಕಟಕಬಾವಿ ಬಳಿಯ ಕಬ್ಬಿನ ಗದ್ದೆ ತಂದಿದ್ದರು. ಬಳಿಕ ಮೃತದೇಹವನ್ನು ತುಂಡು ಮಾಡಿ ಕೊಳವೆಬಾವಿಗೆ ಹಾಕಿದ್ದರು. ನಂತರ ರಕ್ತಸಿಕ್ತ ಬಟ್ಟೆಗಳು, ಡೈರಿಯನ್ನು ಸುಟ್ಟು ಹಾಕಿದ್ದರು ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು