News Karnataka Kannada
Monday, April 29 2024
ಬೆಳಗಾವಿ

ಲೋಕಸಭೆ ಚುನಾವಣೆ: ಕೆಲಸದ ಆಧಾರದ ಮೇಲೆ ನನಗೆ ಟಿಕೆಟ್ ಸಿಗುತ್ತದೆ- ಶೋಭಾ ಕರಂದ್ಲಾಜೆ

ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Photo Credit : News Kannada

ಬೆಳಗಾವಿ: ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಅವರು ಬೆಳಗಾವಿಯಲ್ಲಿ ಮಾತನಾಡಿ, ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತದೆ ಎಂದರು. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದಿದ್ದಾರೆ ಶೋಭ.

ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ‌ಆಗಲಿದೆ. ಪಿತೂರಿ ಮಾಡಿದಾಗಲೇ ಹೈಕಮಾಂಡ್‌ ನಮ್ಮ ಬಗ್ಗೆ ಗಮನ ಕೊಡುತ್ತದೆ. ವಿರೋಧ ಏಕೆ ಮಾಡ್ತಿದ್ದಾರೆ ಎಂಬುದರ ವರದಿ ತರಿಸಿಕೊಳ್ಳುತ್ತಾರೆ, ಆಗ ಸತ್ಯ ಗೊತ್ತಾಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ,‌ ಅಭಿವೃದ್ಧಿ ಆಧಾರದ ಮೇಲೆ‌ ಮತ‌ ಕೇಳುತ್ತೇನೆ ಎಂದು ಅವರು ಹೇಳಿದ್ದಾರೆ.

ಟಿಕೆಟ್ ಕೊಡುವ ಬಗ್ಗೆ ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ, ನಮ್ಮ ಕೇಂದ್ರ ಚುನಾವಣೆ ಮಂಡಳಿ ಇದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ ಏನು ಎಂಬುದರ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆಂಬುದನ್ನು ಪ್ರಧಾನಿಯೂ ಹೇಳಿಲ್ಲ, ನಡ್ಡಾ ಅವರೂ ಹೇಳಿಲ್ಲ, ಶಾ ಕೂಡ ಹೇಳಿಲ್ಲ. ಇವೆಲ್ಲ ಊಹಾಪೋಹ ಎನಿಸುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು