ಬೆಳಗಾವಿ: ಬೆಳಗಾವಿಯಲ್ಲೊಂದು ಆಘಾತಕಾರಿ ಘಟನೆ ಸಂಭವಿಸಿದ್ದು, ಪತಿಯೇ ತನ್ನ ಪತ್ನಿಯ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.
ಇದೀಗ ಆರೋಪಿ ಕಿರಣ್ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಇತ ಪತ್ನಿಯಿಂದ ವಿಚ್ಛೇದನ ಬಯಸಿದ್ದ ಇದಕ್ಕೆ ಪತ್ನಿ ನಿರಾಕರಿಸಿದ್ದು, ಇದರಿಂದ ಕೋಪಗೊಂಡ ಪತಿ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.ಈತ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಇಚ್ಛಿಸಿದ್ದಾನೆ.
ಕಿರಣ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದನು. ಅಷ್ಟಕ್ಕೂ ಸುಮ್ಮನಾಗದ ಆತ, ಪತ್ನಿಗೆ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುವುದನ್ನು ಮುಂದುವರಿಸಿದ್ದನು. ಇದರಿಂದ ದಿಕ್ಕೆ ತೋಚದಂತಾದಾಗ ಮಹಿಳೆ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರುತ್ತಾಳೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಿರಣ್ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಆತನ ಮೊಬೈಲ್ನಲ್ಲಿ ಪತ್ನಿಯ ಅಶ್ಲೀಲ ವಿಡಿಯೋ, ಫೋಟೋ ಇರುವುದು ಗೊತ್ತಾಗಿದೆ.
ಈತನ ಆರೋಪ ಸಾಬೀತಾಗುತ್ತಿದ್ದಂತೆ ಪೊಲೀಸರು ಬಂಧಿಸಲು ಮುಂದಾದಾಗ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಆತನನ್ನ ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ಸೇರಿಸಿದ್ದರು. ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಕಿರಣ್ನನ್ನು ಪೊಲೀಸರು ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.