News Karnataka Kannada
Sunday, May 12 2024
ಬೆಳಗಾವಿ

ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ

Modi (3)
Photo Credit : NewsKarnataka

ಬೆಳಗಾವಿ: ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ ಶನಿವಾರ (ಏ.27) ರಾತ್ರಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು (ಏ.28) ಬೆಳಗಾವಿ, ದಾವಣಗೆರೆ, ಹೊಸಪೇಟೆ, ಶಿರಸಿಯಲ್ಲಿ ನಡೆಯುವ ನಾಲ್ಕು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10.55ಕ್ಕೆ ಹೋಟೆಲ್​ನಿಂದ ಹೊರಡುವ ಪ್ರಧಾನಿ ಮೋದಿ, 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದ ನಡಯುವೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. 11.55ಕ್ಕೆ ಬೆಳಗಾವಿಯಿಂದ ಹೊರಟು 12.55ಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತಲುಪಲಿದ್ದಾರೆ.

ಬಳಿಕ ಶಿರಸಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 2.50ಕ್ಕೆ ದಾವಣಗೆರೆಗೆ ಆಗಮಿಸಲಿದ್ದು, ದಾವಣಗೆರೆ ಸಮಾವೇಶದಲ್ಲಿ ಭಾಗವಹಿಸಿ, ನಂತರ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. ಅಲ್ಲಿ 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗವಹಿಸಿ ರಾತ್ರಿ ಹೊಸಪೇಟೆಯಲ್ಲಿ ಮೋದಿ ವಾಸ್ತವ್ಯ ಮಾಡಲಿದ್ದಾರೆ.

ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಿಂದ ಹೊರಟು ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ತಲುಪಿ ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿವಿ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಮೋದಿ ಪ್ರಯಾಣಿಸಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು