News Karnataka Kannada
Monday, April 29 2024
ಬೆಳಗಾವಿ

ಮಾಜಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಆರೋಗ್ಯ ಸ್ಥಿತಿ ಗಂಭೀರ !

Mla (1)
Photo Credit : News Kannada

ಬೆಳಗಾವಿ: ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ತಡ ರಾತ್ರಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

ಬ್ರೈನ್ ಹಾಮ್ರೇಜ್ ನಿಂದ ರಮೇಶ್ ಜಿಗಜಿಣಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಸುದ್ದಿಯು ಹರಿದಾಡುತ್ತಿದೆ. ವೈದ್ಯರು ತೀವ್ರ ನಿಗಾಘಟದಲ್ಲಿ ರಮೇಶ್ ಜಿಗಜಿಣಗಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು