News Karnataka Kannada
Tuesday, April 30 2024
ಬೆಳಗಾವಿ

ಬೆಳಗಾವಿ: ಎಂಟು ನವಿಲುಗಳಿಗೆ ವಿಷ ಉಣಿಸಿ ಹತ್ಯೆ

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಎಂಟು ನವಿಲುಗಳಿಗೆ ವಿಷ ಉಣಿಸಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
Photo Credit : News Kannada

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಎಂಟು ನವಿಲುಗಳಿಗೆ ವಿಷ ಉಣಿಸಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಝಳಕಿ ಗ್ರಾಮದ ನಿವಾಸಿ ಮಂಜುನಾಥ ಪವಾರ್​ ಬಂಧಿತ ವ್ಯಕ್ತಿ.

ಬಂಧಿತ ಆರೋಪಿ ಇಟ್ಟಿಗೆ ಖಾರ್ನೆಯಲ್ಲಿ ಕೆಲಸ ಮಾಡುತ್ತಿದ್ದ. ನವಿಲು ಮಾಂಸಕ್ಕಾಗಿ ವಿಷ ಹಾಕಿ ಕೊಂದಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ರಾಯಬಾಗ ಎಸಿಎಫ್ ಸುನೀತಾ ನಿಂಬರಗಿ ಪ್ರತಿಕ್ರಿಯೆ ನೀಡಿದ್ದು, ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಮೂರು ಹೆಣ್ಣು, ಐದು ಗಂಡು ನವಿಲು ಕಂಡು ಬಂತು. ತಕ್ಷಣ ಮೃತ ನವಿಲುಗಳನ್ನ ತಂದು ಮರಣೋತ್ತರ ಪರೀಕ್ಷೆ ಮಾಡಿಸಿದ್ದೇವೆ. ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಶೋಧ ಮಾಡುತ್ತಿದ್ದೇವೆ ಎಂದಿದ್ದಾರೆ.

ಮೆಕ್ಕೆಜೋಳದ ಕಾಳುಗಳಲ್ಲಿ ವಿಷ ಹಾಕಿ ಕೊಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು