Categories: ಬೆಳಗಾವಿ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು: ಕುಟುಂಬಸ್ಥರ ಆಕ್ರೋಶ

ಬೆಳಗಾವಿ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( 28) ಮೃತ ಬಾಣಂತಿ.

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ  ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಘಟನೆ ಏನು?: ಲಕ್ಷ್ಮೀಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ತಡರಾತ್ರಿ ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಲಕ್ಷ್ಮೀ ಬೆಳಗ್ಗೆ ಕಿಣೆಯ ಆಸ್ಪತ್ರೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮನೀಡಿದ್ದರು. ಈ ವೇಳೆ ತೀವ್ರ ರಕ್ತಸ್ರಾವವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಸಾಗಿಸಲು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಬಾಣಂತಿ, ಮಗು ಮೃತಪಟ್ಟಿದೆ.

ಬೆಳಗ್ಗೆ ಆಸ್ಪತ್ರೆಯಲ್ಲಿ ನಾರ್ಮಲ್ ಡಿಲೆವರಿ ಆದರೂ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಕ್ತಸ್ರಾವ ಆದರೂ ಗಮನಕ್ಕೆ ತರದೇ ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆಗೆ ಸಾಗಿಸಲು ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡದೆ ಬೇಜವಾಬ್ದಾರಿತನ ಮೆರೆದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

6 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 hours ago