News Karnataka Kannada
Thursday, May 09 2024
ಬೆಳಗಾವಿ

ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ : ಮಗು ಬಲಿ

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಬೆಳಗಾವಿ: ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ.

ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು