ಬೆಳಗಾವಿ: ಶೀಘ್ರವೇ 250 ಕಿರಿಯ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಸಂಚಾರಿ ಪಶುಚಿಕಿತ್ಸಾ ಘಟಕಗಳ ಲೋಕಾರ್ಪಣೆ ಹಾಗೂ ಇಲಾಖೆಯ ಪಶುವೈದ್ಯಕೀಯ ಸ್ಪೆಷಾಲಿಟಿ ಆಸ್ಪತ್ರೆ, 82 ಪಶು ಸಂಜೀವನಿ ಆಯಂಬುಲೆನ್ಸ್, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೀಘ್ರವೇ 250 ಕಿರಿಯ ಪಶುವೈದ್ಯಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಗೋ ಹತ್ಯೆ ನಿಷೇಧ ಕಾಯದೆ ಉಲ್ಲಂಘಿಸಿದವರ ವಿರುದ್ಧ 900 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರತಿ ಜಿಲ್ಲೆಗೊಂದು ಗೋಶಾಲೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.