Categories: ಬೆಳಗಾವಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ

ಬೆಳಗಾವಿ: ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಹಿನ್ನೆಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಮಾರ್ಚ್‌ 28) ಐಪಿಸಿ ಕಲಂ 188ರ ಅಡಿ ಸಮನ್ಸ್‌ ಜಾರಿ ಮಾಡಿ ಆದೇಶ ಹೊರಡಿಸಿದೆ.

ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹ ಕಚೇರಿ ಸಮೀಪದ ಸಭಾಂಗಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಚ್ 20ರಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿದ್ದರು. ಈ ಸಭೆಗೆ ಅನುಮತಿ ಪಡೆದಿರಲಿಲ್ಲ. ಈ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಎದುರಾಗಿತ್ತು.

ಅಷ್ಟೇ ಅಲ್ಲದೇ ತಮ್ಮ ಪುತ್ರ, ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್ ಪರ ಪ್ರಚಾರ ಮಾಡುವಂತೆಯೂ ಸಭೆಯಲ್ಲಿ ಹೆಬ್ಬಾಳ್ಕರ್ ಸೂಚಿಸಿದ್ದರು ಎಂಬ ಆರೋಪ ಇದ್ದು, ಇದರ ಬೆನ್ನಲ್ಲೇ ಹೆಬ್ಬಾಳ್ಕರ್ ಅವರಿಗೆ ಸಮನ್ಸ್ ಜಾರಿಯಾಗಿದ್ದು, ಏಪ್ರಿಲ್ 30ರೊಳಗೆ ಉತ್ತರ ನೀಡುವಂತೆ ಸಮನ್ಸ್‌ ಜಾರಿ ಮಾಡಲಾಗಿದೆ.

Ashitha S

Recent Posts

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

6 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

32 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

41 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

41 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

56 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

1 hour ago