ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಘಟನೆ ಭಾನುವಾರ ನಡೆದಿದೆ.
ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಕಲ್ಲಪ್ಪ ಗಾಣಿಗೇರ (36) ಮಕ್ಕಳಾದ ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು.
ಭಾನುವಾರ ಮಧ್ಯಾಹ್ನ ತೋಟದಲ್ಲಿ ನಿರ್ಮಿಸಿದ ಕೃಷಿ ಹೊಂಡದಲ್ಲಿ ಈಜಲು ಹೋದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.