ಬೆಳಗಾವಿ: ‘ಯುವನಿಧಿ’ ಯೋಜನೆ ಜಾರಿಗೆಗೆ ಸರ್ಕಾರ ಮುಹೂರ್ತ ಫಿಕ್ಸ್ ಆಗಿದೆ. ಇದೇ ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಮುಂದಿನ ವರ್ಷ ಅಂದರೆ 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ.
ಈ ಬಗ್ಗೆ ಉನ್ನತ ಶಿಕ್ಷಣ ಖಾತೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.
ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ಎಕ್ಸ್(ಟ್ವಿಟ್ಟರ್) ಬರೆದುಕೊಂಡಿದ್ದಾರೆ.
ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.
ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ. pic.twitter.com/4fIGGDemYF
— Dr. Sharan Prakash Patil (@S_PrakashPatil) December 12, 2023