Categories: ಬೆಳಗಾವಿ

ಬೆಳಗಾವಿ ಚಳಿಗಾಲದ ಅಧಿವೇಶನ: ಸುವರ್ಣಸೌಧದ ಹೊರಗೆ ಪ್ರತಿಭಟನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ 6 ನೆೇ ದಿನಕ್ಕೆ ಕಾಲಿಟ್ಟಿದ್ದು, ಸುವರ್ಣಸೌಧದ ಹೊರಗೆ ಪ್ರತಿಭಟನೆ ಕಾವು ಕಡಿಮೆ ಆಗಿಲ್ಲ.

ಅನೇಕ ಸಂಘಟನೆಗಳು ಇಂದು ಸಾಲು ಸಾಲು 13 ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ಇನ್ನು ಮತ್ತೊಂದೆಡೆ ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಕೇಳಿ ಬಂದಿದ್ದು ಅಥಣಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಇಂದು ಅಥಣಿ ಬಂದ್​ಗೆ ಕರೆ ಕೊಡಲಾಗಿದೆ

ಜೊತೆಗೆ ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಕೇಳಿ ಬಂದಿದ್ದು ಅಥಣಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಇಂದು ಅಥಣಿ ಬಂದ್​ಗೆ ಕರೆ ಕೊಡಲಾಗಿದೆ. ಅಥಣಿ ಜಿಲ್ಲಾ ಹೋರಾಟ ಸಮಿತಿ ಸ್ವಯಂ ಪ್ರೇರಿತ ಬಂದ್​ಗೆ ಕರೆ ಕೊಟ್ಟಿದ್ದು ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡ್ಕರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ರೈತ ಒಕ್ಕೂಟ ಪ್ರತಿಭಟನೆ ನಡೆಸಲಿದೆ. ರೈತರ ಸಾಲಮನ್ನಾ, 10 ಗಂಟೆ ವಿದ್ಯುತ್, ಮೂರು ರೈತ ವಿರೋಧಿ ಕಾನೂನು ವಾಪಸ್ ಪಡೆಯುವಂತೆ ರೈತರು ಗಾಂಧಿನಗರದಿಂದ ಸುವರ್ಣಸೌಧದ ವರೆಗೂ ಪಾದಯಾತ್ರೆ ಮಾಡಲಿದ್ದಾರೆ.

ಪ್ರತಿಭಟನೆಗಳು:

ಪರಿಶಿಷ್ಟ ಜಾತಿ, ಒಳ ಮೀಸಲಾತಿ, ವರ್ಗೀಕರಣ ಪರಿಷ್ಕೃತ ಶಿಫಾರಸ್ಸು ಆದೇಶ ಕೇಂದ್ರಕ್ಕೆ ಕಳುಹಿಸಲು ಒತ್ತಾಯಿಸಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮಿತಿಯಿಂದ ಪ್ರತಿಭಟನೆ.

ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸಿಗೆ ಒತ್ತಾಯಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಪ್ರತಿಭಟನೆ.

ಉದ್ಯೋಗ, ಯೋಜನೆಗಳಲ್ಲಿ ಮೀಸಲಾತಿಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿ ಸಂಘದಿಂದ ಪ್ರತಿಭಟನೆ.

ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ವಕ್ಫ್ ಬೋರ್ಡ್ ಸ್ಥಾಪಿಸಲು ಆಗ್ರಹಿಸಿ ಹುಬ್ಬಳ್ಳಿಯ ಉತ್ತರ ಕರ್ನಾಟಕ ಅಂಜುಮನ್ -ಎ-ಇಸ್ಲಾಮ್ ದಿಂದ ಹೋರಾಟ.

ಸರ್ಕಾರದಿಂದ ತರಬೇತಿ ನೀಡಿ ಮಾನ್ಯತೆ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮೀಣ ಪ್ರಥಮ ಚಿಕಿತ್ಸಾ ವೈದರ ಸಂಘದಿಂದ ಪ್ರತಿಭಟನೆ.

ವಿವಿಧ ಬೇಡಿಕೆಗೆ ಒತ್ತಾಯಿಸಿ ಛಲವಾದಿ ಮಹಾಸಭಾ, ಕರ್ನಾಟಕ ಸಮತಾ ಸೈನಿಕ ದಳ, ಕರ್ನಾಟಕ ಛಾಯಾ ಚಿತ್ರಗ್ರಾಹಕರ ಸಂಘದಿಂದ ಮನವಿ ಸಲ್ಲಿಕೆ.

ಖಾಸಗಿ ಶಾಲೆಗಳಲ್ಲಿ ಶೇ.25 ರಷ್ಟು ಆರ್​ಟಿಐ ಮಕ್ಕಳ ದಾಖಲಾತಿ ಮರು ಅನುಷ್ಠಾನಕ್ಕೆ ಒತ್ತಾಯಿಸಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದಿಂದ ಹೋರಾಟ.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

3 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

3 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

4 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago