Bengaluru 28°C
Ad

ಬೆಳಗಾವಿ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಓರ್ವ ಮಹಿಳೆ ಸಾವು

Belgavi

ಬೆಳಗಾವಿ: ಬಾಯ್ಲರ್ ಸ್ಪೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.ಮೃತರನ್ನು ಶೋಭಾ ತೇಲಿ ಎಂದು ಗುರುತಿಸಲಾಗಿದೆ.

ಚಿಕ್ಕಟ್ಟಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಿಯಾ ಎಕ್ಸ್ ಪೋರ್ಟ್ ನಲ್ಲಿ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಏಕಾಏಕಿ ಏಕಾಏಕಿ ಬಾಯ್ಲರ್ ಸ್ಪೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ad
Ad
Nk Channel Final 21 09 2023
Ad