Bengaluru 22°C
Ad

ರೋಗಿ ಕೊಳಲು ನುಡಿಸುವಾಗಲೇ ಮೆದುಳು ಶಸ್ತ್ರಚಿಕಿತ್ಸೆ!

ರೋಗಿಯ ಬಳಿ ಕೊಳಲು ನುಡಿಸುವಂತೆ ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾದ ಘಟನೆ ಬೆಳಗಾವಿಯ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳಗಾವಿ: ರೋಗಿಯ ಬಳಿ ಕೊಳಲು ನುಡಿಸುವಂತೆ ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾದ ಘಟನೆ ಬೆಳಗಾವಿಯ ಆಸ್ಪತ್ರೆಯಲ್ಲಿ ನಡೆದಿದೆ.

ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ. ಶಿವಶಂಕರ್ ಮರಜಕ್ಕೆ ಹಾಗೂ ಅರವಳಿಕೆ ತಜ್ಞ ಪ್ರಕಾಶ ಭರಮಗೌಡ ತಂಡದಿಂದ ಬ್ರೈನ್‌ ಸರ್ಜರಿ ಯಶಸ್ವಿಯಾಗಿದೆ. ಇಸ್ರೇಲ್‌ನಿಂದ ಬಂದಿದ್ದ ರೈತನಿಗೆ ಮೆದುಳಿನಲ್ಲಿ ಗಡ್ಡೆ ಬೆಳೆದಿತ್ತು. ಅದನ್ನು ಟ್ಯೂಮರ್ ಆಪರೇಷನ್ ಮಾಡಿ ಹೊರ ತೆಗೆಯಬೇಕಿತ್ತು. ಈ ಸಂದರ್ಭದಲ್ಲಿ ವೈದ್ಯರು ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿದ್ದಾರೆ. ಸುಮಾರು 5 ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ಸಂಪೂರ್ಣ ಯಶಸ್ವಿಯಾಗಿದೆ.

ಈ ಆಸ್ಪತ್ರೆಯ ವೈದ್ಯರ ತಂಡ ಈವರೆಗೂ ಒಟ್ಟು 103 ಮೆದುಳು ಶಸ್ತ್ರಚಿಕಿತ್ಸೆ ಮಾಡಿದೆ. ವೈದ್ಯರ ಸಾಧನೆಗೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಶ್ಲಾಘಿಸಿದ್ದಾರೆ. ಬಳಿಕ ತಾವು ಮಾಡಿದ ಆಪರೇಷನ್ ಕುರಿತು ಡಾ ಶಿವಶಂಕರ್ ಮರಜಕ್ಕೆ ಸುದ್ದಿಗೋಷ್ಠಿ ನಡೆಸಿ, ಗಡ್ಡೆ ಬೆಳೆದ ಜಾಗದ ಪಕ್ಕದಲ್ಲಿ ಮಾತ್ರ ಅರಿವಳಿಕೆ ನೀಡಿ ಆಪರೇಷನ್ ಮಾಡಲಾಗಿದೆ. ಕೇವಲ 1.20 ಲಕ್ಷ ರೂ. ನಲ್ಲಿ ಶಸ್ತ್ರಚಿಕಿತ್ಸೆ ಸೇರಿ ಆಸ್ಪತ್ರೆ ಸಂಪೂರ್ಣ ವೆಚ್ಚ ಆಗಿದೆ ಎಂಬ ಮಾಹಿತಿ ನೀಡಿದರು.

ಗಮನಾರ್ಹ ವಿಚಾರವೆಂದರೆ ಮೆದುಳು ಶಸ್ತ್ರಚಿಕಿತ್ಸೆಗೆ ಅನಸ್ತೇಶಿಯಾ ನೀಡಲಾಗುತ್ತಿಲ್ಲ. ಬದಲಾಗಿ ರೋಗಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆಯೋ ಆ ಮೂಲಕ ಮೆದುಳು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಅದರಂತೆ ಇಲ್ಲಿ ರೋಗಿಗೆ ಕೊಳಲು ನುಡಿಸುವಲ್ಲಿ ಆಸಕ್ತಿ ಇದ್ದಿದ್ದರಿಂದ ಅದನ್ನೇ ನೀಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad
Ad
Nk Channel Final 21 09 2023