ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ನಡದಿದೆ.
ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು. ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ.
ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Ad