Ad

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಸ್ವಾಮೀಜಿ

ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿದ್ದ ಹಲವು ಡಿಸಿಎಂ ಹುದ್ದೆ ವಿಚಾರ ಇದೀಗ ಬದಲಾಗಿ ಮುಖ್ಯಮಂತ್ರಿ ಬದಲಾವಣೆ ಸದ್ದು ಹೆಚ್ಚಾಗುತ್ತಿದೆ.. ಒಕ್ಕಲಿಗ ಸ್ವಾಮೀಜಿ ಹೇಳಿಕೆ ಬಳಿಕ ಇದೀಗ ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ಬಂದಿದೆ.

ಬೆಳಗಾವಿ: ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿದ್ದ ಹಲವು ಡಿಸಿಎಂ ಹುದ್ದೆ ವಿಚಾರ ಇದೀಗ ಬದಲಾಗಿ ಮುಖ್ಯಮಂತ್ರಿ ಬದಲಾವಣೆ ಸದ್ದು ಹೆಚ್ಚಾಗುತ್ತಿದೆ.. ಒಕ್ಕಲಿಗ ಸ್ವಾಮೀಜಿ ಹೇಳಿಕೆ ಬಳಿಕ ಇದೀಗ ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ಬಂದಿದೆ.

Ad
300x250 2

ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದು, ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದಿದ್ದಾರೆ.

ಚಿಕ್ಕೋಡಿ‌‌ ತಾಲೂಕಿನ ಯಡೂರು ಗ್ರಾಮದಲ್ಲಿ ಶ್ರೀಶೈಲ ಜಗದ್ಗುರುಗಳ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನಗಳನ್ನು ಹೆಚ್ಚುವರಿ ಮಾಡಿದರೆ ಲಿಂಗಾಯತ ಮಂತ್ರಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ ಎಂದರು.

Ad
Ad
Nk Channel Final 21 09 2023
Ad