News Karnataka Kannada
Wednesday, April 24 2024
Cricket
ಹುಬ್ಬಳ್ಳಿ-ಧಾರವಾಡ

ಕೊರೋನಾ : ರಾಜ್ಯದಲ್ಲಿ ಕಠಿಣ ನಿಯಮ ಜಾರಿ ಸಾಧ್ಯತೆ

Untitled 61
Photo Credit :

ಹುಬ್ಬಳ್ಳಿ : ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಂಡುಬಂದಿದೆ. ಮೂರು ಅಲೆಗಳನ್ನು ನಿಭಾಯಿಸಿರುವ ಅನುಭವದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎನ್ನುವ ಮಾತನ್ನು ಪರಿಣಿತರು ಹೇಳಿದ್ದಾರೆ. ಈಗಾಗಲೇ ಆರೋಗ್ಯ ಸಚಿವರೂ ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಎಪ್ರಿಲ್ 27 ರಂದು ಪ್ರಧಾನ ಮಂತ್ರಿಗಳ ವೀಡಿಯೋ ಸಂವಾದದ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡುತ್ತೇವೆ ಎಂದರು.

ಜನರು ಜಾಗೃತರಾಗಿರುವುದು ಬಹಳ ಮುಖ್ಯ. ಕೋವಿಡ್ 2 ನೇ ಅಲೆ ಬಂದಾಗ ಅತ್ಯಂತ ಕಡಿಮೆ ಸಂಖ್ಯೆ ಯಲ್ಲಿ ಪ್ರಾರಂಭವಾಗಿ ನಂತರ ಉಲ್ಬಣವಾಯಿತು. ಈಗಾಗಲೇ ವಿಜ್ಞಾನಿಗಳು ಯಾವ ಮಾದರಿಯಲ್ಲಿದೆ ಎಂದು ಪರೀಕ್ಷಿಸುತ್ತಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು