News Karnataka Kannada
Friday, April 19 2024
Cricket
ಹುಬ್ಬಳ್ಳಿ-ಧಾರವಾಡ

ಗಲಭೆಗಳಿಗೆ ಹಿಂದಿನ ಸರ್ಕಾರದ ವೈಫಲ್ಯಗಳೇ ಕಾರಣ: ನಳೀನ್ ಕಟೀಲ್ ಆರೋಪ

Nalin Kumar Kateel
Photo Credit :

ಹುಬ್ಬಳ್ಳಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಲಭೆಕೊರರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದ್ದರೆ ಈಗ ರಾಜ್ಯದಲ್ಲಿ ಇಂತಹ ದುಷ್ಕೃತ್ಯಗಳು ಸಂಭವಿಸುತ್ತಿರಲಿಲ್ಲ. ರಾಜ್ಯದಲ್ಲಿ ಪ್ರಸ್ತುತ ಸಂಭವಿಸುತ್ತಿರುವ ಗಲಭೆಗಳಿಗೆ  ಹಿಂದಿನ ಸರ್ಕಾರದ ವೈಫಲ್ಯವೇ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಮಂಗಳವಾರ ಹಳೆ ಹಬ್ಬಳ್ಳಿಯ ಗಲಭೆ ನಡೆದ ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರಂತಹ ಮುಖ್ಯಮಂತ್ರಿಯನ್ನು ರಾಜ್ಯ ಹಿಂದೆಂದೂ ಕಂಡಿಲ್ಲ. ಅವರ ಆಡಳಿತದ ಅವಧಿಯಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಿತು. ಸಿದ್ದರಾಮಯ್ಯರ ಐದು ವರ್ಷದ ಆಡಳಿತವು ಸಂಪೂರ್ಣ ವಿಫಲವಾಗಿದ್ದು, ಗಲಭೆಗೆ ಕಾರಣರಾದ ಒಬ್ಬೇ ಒಬ್ಬರನ್ನು ಬಂಧಿಸಲು ಸಹ ಅವರಿಂದ ಸಾಧ್ಯವಾಗಿಲ್ಲ ಎಂದರು.

ಟಿಪ್ಪು ಜಯಂತಿ ಹೆಸರಲ್ಲಿ ರಾಜ್ಯದಾದ್ಯಂತ ಗಲಭೆಗಳು ನಡೆದವು. ಮೈಸೂರು ಹಾಗೂ ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಹತ್ಯೆಯಾಯಿತು. ಅವುಗಳ ಹಿಂದಿರುವ ಶಕ್ತಿಗಳನ್ನು ಸಹ ಗುರುತಿಸುವ ಕೆಲಸ ಆಗಲಿಲ್ಲ. ಆಗಲೇ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಈಗ ಇಂತಹ ಗಲಭೆಗಳು ನಡೆಯುತ್ತಿರಲಿಲ್ಲ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು