News Karnataka Kannada
Tuesday, April 23 2024
Cricket
ಹುಬ್ಬಳ್ಳಿ-ಧಾರವಾಡ

ಪ್ರಸಿದ್ದ ರಂಗ ಕಲಾವಿದೆ ಲಕ್ಷ್ಮಿಬಾಯಿ ಏಣಗಿ ನಿಧನ

Lakshmibayi Enagi
Photo Credit :

ಧಾರವಾಡ: ಪ್ರಸಿದ್ದ ರಂಗ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಬಾಳಪ ಏಣಗಿ (96) ಮಂಗಳವಾರ ಇಲ್ಲಿನ ರಜತಗಿರಿ ನಿವಾಸದಲ್ಲಿ ನಿಧನರಾದರು.

ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 2:೦೦ ಗಂಟೆಗೆ ಹೋಸಯಲಾಪೂರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಚಿತ್ರನಟ ದಿ. ನಟರಾಜ ಏಣಗಿ ಹಾಗೂ ಓರ್ವಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. 1940-50 ರ ದಶಕದಲ್ಲಿ ಕನ್ನಡ ಮತ್ತು ಮರಾಠಿ ರಂಗಭೂಮಿಯಲ್ಲಿ ಪ್ರಸಿದ್ದ ನಟಿಯಾಗಿದ್ದ ಅವರು ಕರ್ನಾಟಕದ ಏಕೀಕರಣ ಚಳುವಳಿ ಆರಂಭವಾದಾಗ ತಮ್ಮ ನಾಟಕಗಳ ಮೂಲಕವೇ ಕನ್ನಡ ಕಟ್ಟುವ ಕೆಲಸ ಮಾಡಿದರು.

ಸಿಂಗಾರೆವ್ವ ಮತ್ತು ಅರಮನೆ ಸೇರಿದಂತೆ ಹತ್ತಾರು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಅವರು ಇಡೀ ತಮ್ಮ ಜೀವನವನ್ನೇ ರಂಗಭೂಮಿಗಾಗಿ ಮುಡುಪಾಗಿಟ್ಟಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ನೂರಕ್ಕೂ ಹೆಚ್ಚು ರಂಗ ಸನ್ಮಾನಗಳು ಅವರ ಮುಡಿಗೇರಿದ್ದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು