News Karnataka Kannada
Thursday, April 18 2024
Cricket
ಹುಬ್ಬಳ್ಳಿ-ಧಾರವಾಡ

ರಾಜ್ಯದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ:ಸಿಎಂ ಬೊಮ್ಮಾಯಿ‌

Cm Bommayi
Photo Credit :

ಹೊಸಪೇಟೆ: ರಾಜ್ಯದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಎಚ್ಚರಿಕೆ ನೀಡಿದರು.

ಕಾನೂನು ಕೈಗೆತ್ತಿಕೊಂಡಿದ್ದರಿಂದ ಈ ಘಟನೆ ಸಂಭವಿಸಿದೆ. ದುಷ್ಕೃತ್ಯ ಎಸಗಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಪೊಲೀಸರು ಈಗಾಗಲೇ ಹಲವರನ್ನು ಬಂಧಿಸಿದ್ದಾರೆ.

ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಸಾಮಾಜಿಕ ಜಾಲತಾಣವೊಂದರಲ್ಲಿ ಪ್ರಚೋದನಾತ್ಮಕ ಸಂದೇಶ ಹಂಚಿಕೆ ಮಾಡಿದವರ ಬಂಧನವಾಗಿದೆ.

ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದ್ದು, ಇಂತಹ ಕೃತ್ಯ‌ ಎಸಗಿದ ಸಂಘಟನೆಗಳನ್ನು ಪತ್ತೆ‌ ಹಚ್ಚುತ್ತೇವೆ. ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಇದನ್ನು ಕರ್ನಾಟಕ ರಾಜ್ಯ ಸಹಿಸುವುದಿಲ್ಲ. ಇದಕ್ಕೆ ಮತ್ತೆ ಬೇರೆ ರೀತಿಯ ರಾಜಕೀಯ ಬಣ್ಣ ಬಳಿಯುವುದು ಬೇಡ. ಯಾರೇ ಘಟನೆಯಲ್ಲಿ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು. ಅಹಿತಕರ ಘಟನೆ ಸಂಭವಿಸಿದ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು