ಹುಬ್ಬಳ್ಳಿ : ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 82.75 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡ ಕೇಶ್ವಾಪುರ ಠಾಣೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ .
ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊ0ದಿಗೆ ಇಲ್ಲಿನ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜ್ ಬಳಿ ಬಾಗಲಕೋಟೆಯಿಂದ ನಗರಕ್ಕೆ ಬರುತ್ತಿದ್ದ ಸ್ವಿಪ್ಟ್ ಡಿಜೈರ್(ಕೆಎ 36, ಎನ್ 2055)ನ್ನು ತಡೆದು ಪರಿಶೀಲಿಸಿದಾಗ ಹಣ ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಿದ್ದಾರೆ.
ರಾಜಸ್ಥಾನ ಮೂಲದವನಾದ ಹಾಲಿ ಬಾಗಲಕೋಟ ಭವಾನಿ ಟೀ ಸ್ಟಾಲ್ ಟಾಂಗಾ ಸ್ಟಾö್ಯಂಡ್ ಹತ್ತಿರದ ನಿವಾಸಿ ಕಾರು ಚಾಲಕ ಗೋಕುಲರಾಮ ವೀರಾಮಾರಾಮ ರಬಾರಿ(34) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಚಾಲಕನಿ0ದ 82,75,100 ರೂ. ನಗದು, 5 ಲಕ್ಷ ರೂ. ಕಿಮ್ಮತ್ತಿನ ಒಂದು ಸ್ವಿಪ್ಟ್ ಡಿಜೈರ್ ಕಾರು ಹಾಗೂ ಎರಡು ಆಂಡ್ರೆöಡ್ ಮೊಬೈಲ್ ಹ್ಯಾಂಡ್ ಸೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಇದು ಮಹಾನಗರ ಪಾಲಿಕೆ ಚುನಾವಣೆಗಾಗಿ ಸಾಗಿಸುತ್ತಿದ್ದ ಹಣವೋ ಅಥವಾ ಹವಾಲಾ ಹಣವೋ ಎಂಬುದು ತನಿಖೆಯಿಂದ ಪತ್ತೆಯಾಗಬೇಕಿದೆ.