News Karnataka Kannada
Wednesday, May 08 2024
ಹುಬ್ಬಳ್ಳಿ-ಧಾರವಾಡ

ಅಣ್ಣಿಗೇರಿಯಲ್ಲಿ ಶೇ 72ರಷ್ಟು ಮತದಾನ

Election
Photo Credit :

ಅಣ್ಣಿಗೇರಿ:  ಸ್ಥಳೀಯ ಪುರಸಭೆಗೆ ಸೋಮವಾರ ಶಾಂತಿಯುತವಾಗಿ ಮತದಾನ ನಡೆಯಿತು. 23 ವಾರ್ಡ್‌ಗಳ ಎಲ್ಲ 23 ಮತಗಟ್ಟೆಗಳಲ್ಲಿ ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಒಟ್ಟು 21,561 ಮತದಾರರಿದ್ದು ಅದರಲ್ಲಿ ಪುರುಷರು 10,677, ಮಹಿಳೆಯರು 10,822, ಇತರೆ 2 ಇದ್ದಾರೆ.

7,896 ಪುರುಷರು, 7531 ಮಹಿಳೆಯರು ಹಾಗೂ 2 ಇತರೆ ಮತಚಲಾಯಿಸಿದ್ದಾರೆ. ಒಟ್ಟು ಶೇ 72ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್‌ ಮಂಜುನಾಥ ಅಮಾಸಿ ತಿಳಿಸಿದರು.

ಪ್ರತಿ ಮತದಾನ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಥರ್ಮೊಮೀಟರ್‌ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಇದುವರೆಗೆ ಕೋವಿಡ್‌ ಲಸಿಕೆ ಪಡೆಯದವರಿಗೆ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ನಗರದ ಶಾಸಕರ ಮಾದರಿ ಕೇಂದ್ರ ನಂ. 1ರ ಮುಂಭಾಗದಲ್ಲಿ ಸಾವಿರಾರು ಕಾರ್ಯಕರ್ತರು ಜಮಾಯಿಸಿ ಕೆಲಹೊತ್ತು ಬಿಗುವಿನ ವಾತಾವರಣ ಉಂಟಾಗಿತ್ತು. ಪೊಲೀಸರು ಅವರನ್ನು ಕದಲಿಸಿ, ವಾತಾವರಣ ತಿಳಿಗೊಳಿಸಿದರು.

ಸ್ಥಳೀಯ ಶ್ರೀ ಅಮೃತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಡಿ.30 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು