ಅಣ್ಣಿಗೇರಿ: ಸ್ಥಳೀಯ ಪುರಸಭೆಗೆ ಸೋಮವಾರ ಶಾಂತಿಯುತವಾಗಿ ಮತದಾನ ನಡೆಯಿತು. 23 ವಾರ್ಡ್ಗಳ ಎಲ್ಲ 23 ಮತಗಟ್ಟೆಗಳಲ್ಲಿ ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಒಟ್ಟು 21,561 ಮತದಾರರಿದ್ದು ಅದರಲ್ಲಿ ಪುರುಷರು 10,677, ಮಹಿಳೆಯರು 10,822, ಇತರೆ 2 ಇದ್ದಾರೆ.
7,896 ಪುರುಷರು, 7531 ಮಹಿಳೆಯರು ಹಾಗೂ 2 ಇತರೆ ಮತಚಲಾಯಿಸಿದ್ದಾರೆ. ಒಟ್ಟು ಶೇ 72ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್ ಮಂಜುನಾಥ ಅಮಾಸಿ ತಿಳಿಸಿದರು.
ಪ್ರತಿ ಮತದಾನ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಥರ್ಮೊಮೀಟರ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಇದುವರೆಗೆ ಕೋವಿಡ್ ಲಸಿಕೆ ಪಡೆಯದವರಿಗೆ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ನಗರದ ಶಾಸಕರ ಮಾದರಿ ಕೇಂದ್ರ ನಂ. 1ರ ಮುಂಭಾಗದಲ್ಲಿ ಸಾವಿರಾರು ಕಾರ್ಯಕರ್ತರು ಜಮಾಯಿಸಿ ಕೆಲಹೊತ್ತು ಬಿಗುವಿನ ವಾತಾವರಣ ಉಂಟಾಗಿತ್ತು. ಪೊಲೀಸರು ಅವರನ್ನು ಕದಲಿಸಿ, ವಾತಾವರಣ ತಿಳಿಗೊಳಿಸಿದರು.
ಸ್ಥಳೀಯ ಶ್ರೀ ಅಮೃತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಡಿ.30 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…
ಇಂದು (ಭಾನುವಾರ) ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…