ಧಾರವಾಡ : ರಾಜ್ಯದ ಸಾವಿನ ಹೆದ್ದಾರಿ ಎಂದೆ ಕುಖ್ಯಾತಿ ಪಡೆದ ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ಮತ್ತೆ ಸುದ್ದಿಯಾಗಿದೆ. ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಅವರ ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವಿಣ ಕುಮಾರ ಕಾರಿನಲ್ಲಿದ್ದವರು. ಬೆಳಗಿನ ಜಾವ 5.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಎಲ್ಲರನ್ನೂ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ದಾನಮ್ಮನವರ ಅವರ ವರ್ಗಾವಣೆ ಆದೇಶ ನಿನ್ನೆಯಷ್ಟೇ ಬಂದಿತ್ತು. ವಿಜಯಪುರ ಜಿಲ್ಲಾಧಿಕಾರಿಯಾಗಲು ಹೊರಟಿದ್ದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದೆ.
ಯರಿಕೊಪ್ಪ ಕ್ರಾಸ್ ಬಳಿಯಲ್ಲಿ ಎದುರಿಗೆ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…