ಅನಧಕೃತ ಅಂಗಡಿ ತೆರವು; ಪೋಲೀಸರ ಮೇಲೆಯೇ ಪೆಟ್ರೋಲ್‌ ಎರಚಿದ ವಕೀಲ

ಧಾರವಾಡ: ಅನಧಿಕೃತ ಅಂಗಡಿ ತೆರವುಗೊಳಿಸುವ ಸಂಬಂದದಲ್ಲಿ ವ್ಯಕ್ತಿಯೊಬ್ಬ ಸಹಾಯಕ ಪೋಲೀಸ್‌ ಕಮೀಷನರ್‌ ಅವರ ಮೇಲೆ ಪೆಟ್ರೋಲ್​ ಎರಚಿರುವ ಘಟನೆ ಧಾರವಾಡದ ಸೂಪರ್​ ಮಾರ್ಕೆಟ್​ನಲ್ಲಿ ಗುರುವಾರ ನಡೆದಿದೆ.
ಪೋಲೀಸರ ತೆರವು ಕಾರ್ಯಾಚರಣೆಯನ್ನು ವಿರೋಧಿಸಿದ ವ್ಯಕ್ತಿ ಓರ್ವ ವಕೀಲನಾಗಿದ್ದು ತನ್ನ ಮೈ ಮೇಲೆ ಸ್ವತಃ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ. ಈ ವೇಳೆ ಇದನ್ನು ತಡೆಯಲು ಬಂದ ಪೊಲೀಸರ ಮೇಲೆಯೇ ಪೆಟ್ರೋಲ್​ ಎರಚಿದ ಚೌಧರಿ ಅವಾಂತರ ಸೃಷ್ಟಿಸಿದರು.
ಚೌಧರಿ ಅವರು ಸೂಪರ್ ಮಾರ್ಕೆಟ್ ವ್ಯಾಪಾರಿಗಳ ಪರ ನ್ಯಾಯವಾದಿಯಾಗಿದ್ದಾರೆ. ಮಹಾನಗರ ಪಾಲಿಕೆಯಿಂದ ನಿನ್ನೆ ಅನಧಿಕೃತ ಅಂಗಡಿ ತೆರವು ಕಾರ್ಯ ನಡೆಯುತ್ತಿತ್ತು. ತೆರವು ವಿರೋಧಿಸಿ ಚೌಧರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಡೆಯಲು ಹೋದ ಎಸಿಪಿ ಅನುಷಾ ಮೇಲೆ ಎರಚಿ ಹುಚ್ಚಾಟ ಮೆರೆದಿದ್ದು, ಇದಕ್ಕೆ ಸಂಬಂಧಿಸಿದ ಪೆಟ್ರೋಲ್​ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೋಲೀಸರು ತನಿಖೆ ನಡೆಸುತಿದ್ದಾರೆ.

Indresh KC

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago