ಕರೋನ 3ನೇ ಅಲೆ ಏರಿಕೆ‌‌‌ ಕಂಡರೆ ಶಾಲೆ ಸ್ಥಗಿತದ ಬಗ್ಗೆ ನಿರ್ಧಾರ: ಬಿ. ಸಿ. ನಾಗೇಶ್

ದಾವಣಗೆರೆ:  ಕರೋನ 3ನೇ ಅಲೆ ಹೆಚ್ಚಾದರೆ ಶಾಲೆ ಸ್ಥಗಿತದ ಬಗ್ಗೆ ನಿರ್ಧಾರ ಮಾಡಲಾಗುವುದು ಅಂತ ಸಚಿವ ಬಿ.ಸಿ ನಾಗೇಶ್‌ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತ ತಿಳಿಸಿದರು. ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.  ಕೊಡಗಿನ ನವೋದಯ ಶಾಲೆಯ 31 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಆತಂಕದ ವಾತವಾರಣವನ್ನು ನಿರ್ಮಾಣ ಮಾಡಲಾಗಿದೆ. ಈ ನಡುವೆ ರಾಜ್ಯದಲ್ಲಿ ಮೂರನೇ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಶಾಲೆಗಳ ಪುನರಾರಂಭದ ಕುರಿತು ಸಮಾಲೋಚನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಮದನ್ ಗೋಪಾಲ್ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚನೆಯಾಗಿದೆ. 0-1, 3, 9 ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ನಡೆದಿದೆ ಅಂತ ಅವರು ಇದೇ ವೇಳೆ ತಿಳಿಸಿದರು. ಶಾಲಾ ಮಕ್ಕಳ ಪಠ್ಯ ಕಡಿತದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ದಸರಾ ರಜೆಯ ಹಿನ್ನೆಲೆಯಲ್ಲಿ ಪೂರ್ಣಾವಧಿ ಪಠ್ಯಕ್ರಮವನ್ನು ಕಲಿಸಲಾಗುತ್ತದೆ. ಇದಕ್ಕೆ ಶಿಕ್ಷಕರು ಸಿದ್ಧರಾಗಿದ್ದಾರೆ. ಮಕ್ಕಳು ಕಲಿಯಲು ಉತ್ಸುಕರಾಗಿದ್ದಾರೆ. ಪಠ್ಯ ಕಡಿತದಿಂದ ಮುಂದಿನ ಶೈಕ್ಷಣಿಕ ವರ್ಷ ಮಕ್ಕಳಿಗೆ ತೊಂದರೆಯಾಗಲಿದೆ ಎಂದರು.

Swathi MG

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

22 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

40 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago