ಕಾಂಗ್ರೆಸ್ ಅನವಶ್ಯಕ ವಿಚಾರ ಇಟ್ಟುಕೊಂಡು ರಾತ್ರಿಯಿಡಿ ಧರಣಿ ಮಾಡುತ್ತಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಸದನದಲ್ಲಿ ಚರ್ಚಿಸಲು ಸಾಕಷ್ಟು ವಿಷಯಗಳಿವೆ. ಜನತೆ ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ವೋಟ್ ಬ್ಯಾಂಕ್ ದೃಷ್ಟಿಯಿಂದ ಅನವಶ್ಯಕ ವಿಚಾರ ಇಟ್ಟುಕೊಂಡು ರಾತ್ರಿಯಿಡಿ ಧರಣಿ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಈ ರೀತಿ ಮಾಡುತ್ತಿರುವುದು ಎಷ್ಟು ಸರಿ? ವಿರೋಧ ಪಕ್ಷ ಸ್ಥಾನದಲ್ಲಿದ್ದು, ಸರ್ಕಾರಕ್ಕೆ ಉತ್ತಮವಾದ ಸಲಹೆ ಸೂಚನೆ ನೀಡಬೇಕು. ಆದರೆ ಅವರು ಇಲ್ಲ ಸಲ್ಲದ ವಿಷಯಗಳನ್ನು ಮುಂದಿಟ್ಟುಕೊಂಡು ಧರಣಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರಿಗೆ ದೇವರು ಸದ್ಭುದ್ಧಿ ನೀಡಲಿ ಎಂದರು.

ಹಿಜಾಬ್ ಗೊಂದಲವನ್ನು ಕೆಲವರು ಉದ್ದೇಶಪೂರ್ವಕವಾಗಿ ಮುಗಿಸುತ್ತಿಲ್ಲ.ಸರ್ಕಾರಕ್ಕೆ ಸಲಹೆ ನೀಡುತ್ತಿದ್ದೆನೆ ಕೆಲವು ಕಡೆ ಈ ರೀತಿ ಕೃತ್ಯ ಮಾಡುತ್ತಿರುವವರಿಗೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತಿದೆ ಎಂದು ತಿಳಿಸಿದರು.
ಮಧ್ಯಂತರ ಆದೇಶ ಪಾಲನೆ ಮಾಡದ ಕಡೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸಬೇಕು. ಮುಂದೆ ಕೋರ್ಟ್ ಅಂತಿಮ ಆದೇಶ ಬಂದಾಗಲೂ ಹೀಗೆಯೆ ನಡೆದುಕೊಳ್ಳುತ್ತೇವೆ ಎಂದರೆ ಹೇಗೆ? ವಿದ್ಯಾರ್ಥಿಗಳನ್ನು ಹೊರತುಪಡಿಸಿ ಶಾಲಾ ಕಾಲೇಜುಗಳಿಗೆ ಬಂದು ಹಿಜಾಬ್ ಧರಿಸಲು ಹಾಗೂ ತೆಗೆಸಲು ಒತ್ತಾಯ ಮಾಡಲು ಬರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲು ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡುತ್ತೇನೆ ಎಂದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago