ಕಾಂಗ್ರೆಸ್ ಪಠ್ಯ ಪುಸಕ್ತದ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಕಿಡಿ

ಹುಬ್ಬಳ್ಳಿ: ರಾಷ್ಟ್ರೀಯ ಸಯಂಸೇವಕ ಸಂಘದ ವಿರುದ್ಧ ರಾಜಕೀಯ ಉದ್ದೇಶಕ್ಕಾಗಿ ಟೀಕೆಗಳನ್ನು ಮಾಡುತ್ತ ಬಂದ ಕಾಂಗ್ರೆಸ್ ದೇಶದ್ಯಾಂತ ಅಧಿಕಾರ ಕಳೆದುಕೊಂಡಿದೆ. ಸಿದ್ದರಾಮಯ್ಯ ರಾಜ್ಯದಲ್ಲೂ ಅದನ್ನೇ ಮುಂದುವರಿಸಿದ್ದು, ಕರ್ನಾಟಕದಲ್ಲೂ ಅದೇ ಗತಿ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 75 ವರ್ಷದಿಂದ ಆರೆಸ್ಸೆಸ್ ದೇಶಭಕ್ತಿ ಮತ್ತು ಜನರ ಸೇವೆ ಮಾಡಿಕೊಂಡು ಬಂದಿದೆ. ಅನಾಹುತಗಳಾದಾಗ, ಜನ ಸಂಕಷ್ಟದಲ್ಲಿದ್ದಾಗ, ಸರ್ಕಾರವೂ ಗಮನ ಹರಿಸದಿದ್ದಾಗ ಆರೆಸ್ಸೆಸ್ ಸ್ಪಂದಿಸಿದೆ. ಕಾಂಗ್ರೆಸ್‌ನವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಂಘವನ್ನು ಟೀಕಿಸುತ್ತಿದ್ದಾರೆ ಎಂದರು.

ಪಠ್ಯ ಪುಸಕ್ತದ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಶಿಕ್ಷಣ ಸಚಿವರು ಈಗಾಗಲೇ ಆ ಕುರಿತು ಉತ್ತರ ಕೊಟ್ಟಿದ್ದಾರೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ವಿಚಾರದ ಕುರಿತು ಗೊತ್ತಾಗಬೇಕಾದರೆ ಜೂನ್ 10ರವರೆಗೆ ಕಾಯಿರಿ’ ಎಂದು ಪ್ರಶ್ನೆಯೊಂದಕ್ಕೆ ‌ಪ್ರತಿಕ್ರಿಯಿಸಿದರು.

Sneha Gowda

Recent Posts

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

17 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

44 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

2 hours ago