ಹುಬ್ಬಳ್ಳಿ-ಧಾರವಾಡ

ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿದ ಸಿಎಂ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಬ್ರಿಟಿಷ್ ರ ವಿರುದ್ಧ ಹೋರಾಡಿದ ನಾಡಿನ ಧೀಮಂತ, ಶ್ರೇಷ್ಠ ಪ್ರಥಮ ಮಹಿಳೆಯಾದ ರಾಣಿ ಕಿತ್ತೂರು ಚೆನ್ನಮ್ಮಳ ತ್ಯಾಗ, ಬಲಿದಾನ ಎಲ್ಲ ಜನತೆ ಸ್ಮರಿಸುವಂತ ದಿನವಾಗಿದೆ. ಬೆಳಗಾವಿಯಿಂದ ಬೆಂಗಳೂರವರೆಗೆ ಚೆನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.  ಶನಿವಾರ ನಗರದ  ಕಿತ್ತೂರ ರಾಣಿ ಚೆನ್ನಮ್ಮಳ ಜಯಂತಿ ಅಂಗವಾಗಿ ಇಲ್ಲಿಯ ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು.

ಬ್ರಿಟಿಷ್ ರ ವಿರುದ್ಧ ರಣಕಹಳೆ ಓದಿದ ರಾಣಿ ಚೆನ್ನಮ್ಮಳ ನಗರದಲ್ಲಿ ಮೂರ್ತಿ ಮಾಡಬೇಕಾದರೆ ಅದು ದೊಡ್ಡ ಹೋರಾಟವಾಗಿತು. ನಮ್ಮ ತಂದೆಯವರು ಉಸ್ತುವಾರಿ ಸಚಿವರಿದ್ದಾಗ ಎರಡು ವರ್ಷದ ಸುದೀರ್ಘ ಹೋರಾಟದ ಫಲವಾಗಿ ಈ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ ಎಂದರು.

ಈಗ ಕಿತ್ತೂರ ರಾಣಿ ಚೆನ್ನಮ್ಮ ಉತ್ಸವ ಮಾಡವ ಮಹತ್ತರ ಕಾರ್ಯ ನನ್ನ ಪಾಲಿಗೆ ಬಂದಿದೆ. 2011ರಲ್ಲಿ ನಾನು ಉಸ್ತುವಾರಿ ಸಚಿವನಿದ್ದಾಗ ಕಿತ್ತೂರ ಪ್ರಾಧಿಕಾರ ಮಾಡಿ ಅವತ್ತು ಎಂಟು ಕೋಟಿ ರೂ. ಬಿಡುಗಡೆಗೊಳಿಸಿ ಆ ಕೆಲಸ ಪ್ರಾರಂಭಿಸಲಾಗಿತ್ತು.

ಈ ವರ್ಷ 50 ಕೋಟಿ ಕ್ರಿಯಾಯೋಜನೆಗೆ ಅನುಮೋದನೆ ಕೊಟ್ಟಿದೆ ಹಣವನ್ನು ಸಹ ಬಿಡುಗಡೆ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಮತ್ತು ಸಂಗೋಳಿ ರಾಯಣ್ಣನ ಎಲ್ಲ ಸೂತ್ರಗಳನ್ನು ಬಿಜೆಪಿ ಸರ್ಕಾರ ಈಡೇರಿಸುತ್ತೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕೆ ಸಚಿವ ಮುರಗೇಶ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ರಾಜುಗೌಡಾ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಶಿವಾನಂದ ಮುತ್ತಣ್ಣವ ಇದ್ದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago