News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ, ನಾಳೆ ದೆಹಲಿಗೆ: ಸಿಎಂ ಬೊಮ್ಮಾಯಿ

Basavaraj Cm
Photo Credit :

ಹುಬ್ಬಳ್ಳಿ: ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ವಿಶೇಷವಾಗಿ ಗಡಿಭಾಗಗಳಲ್ಲಿ ಕಠಿಣ ನಿಯಮ ತರುವ ಅನಿವಾರ್ಯತೆಯಿದೆ.ನಾಳೆ ದೆಹಲಿಗೆ ಹೋಗುತ್ತಿದ್ದು ಅಲ್ಲಿ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ನಿಯಮ ಜಾರಿಗೆ ತರಲಾಗುವುದು. ಎಂದು ಹೇಳುವ ಮೂಲಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ತರುವ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರೋಗ್ಯ ಇಲಾಖೆ ಮತ್ತು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕ ಪ್ರಗತಿ ಮತ್ತು ಕೇಂದ್ರ ಸರ್ಕಾರದ ಅನಿಸಿಕೆ, ಶಿಫಾಸಲು ಏನಿದೆ ಎಂದು ಚರ್ಚೆ ಮಾಡುತ್ತೇನೆ ಎಂದರು.

ಲಾಕ್ ಡೌನ್ ಇಲ್ಲ: ಕೋವಿಡ್ ಒಂದನೇ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿ ಈಗಾಗಲೇ ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಎರಡನೇ ಅಲೆ ತಗ್ಗಿದ ನಂತರ ಜನಜೀವನ ಸಹಜ ಸ್ಥಿತಿಗೆ ಬರುತ್ತಿರುವ ಸಂದರ್ಭದಲ್ಲಿ ಮತ್ತೆ ಲಾಕ್ ಡೌನ್ ಹೇರಿಕೆ ಮಾಡಿದರೆ ಕಷ್ಟವಾಗುತ್ತದೆ. ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ, ಲಾಕ್ ಡೌನ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಈಗಿರುವ ಸೋಂಕಿನ ತೀವ್ರತೆಯನ್ನು ತಿಳಿದುಕೊಂಡು ಏನೇನು ಮಾರ್ಗಸೂಚಿ ಮತ್ತು ನಿಯಮ ಹೇರಬೇಕೆಂದು ಚಿಂತಿಸಲಾಗುವುದು. ಯಾರೂ ಗಾಬರಿಗೊಳಗಾಗುವುದು ಬೇಡ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು