ಧಾರವಾಡ : ಮಾಜಿ ಸಚಿವ ಡಿ.ಕೆ.ಶಿವಕುಮಾರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಯು.ಬಿ.ಶೆಟ್ಟಿ ಮನೆ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಾದಿಂದ ಬಂದ ಐದು ಜನ ಐಟಿ ಅಧಿಕಾರಿಗಳು ಶೆಟ್ಟಿ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ.
ಶೆಟ್ಟಿ ಅವರು ಮೂಲತಃ ಉಡುಪಿ ಜಿಲ್ಲೆಯವರಾಗಿದ್ದು, ಗುತ್ತಿಗೆದಾರರಾಗಿ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಇದಲ್ಲದೇ ಬೆಂಗಳೂರು, ಧಾರವಾಡ, , ಬೈಂದೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು, ಹಣಕಾಸಿಗೆ ಸಂಬಂಧಪಟ್ಟಂತೆ ಐಟಿ ದಾಳಿ ನಡೆಸಿದೆ ಎನ್ನಲಾಗಿದೆ. ಇನ್ನೂ ಕಾಂಗ್ರೆಸ್ ಈ ದಾಳಿಯನ್ನು ಖಂಡಿಸಿದ್ದು, ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಈ ದಾಳಿ ನಡೆಸಿದೆ ಅಂತ ಆರೋಪಿಸಿದೆ.