ತಾರಿಹಾಳ ಬೈಪಾಸ್ ಬಳಿ ಖಾಸಗಿ ಬಸ್ -ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಖಾಸಗಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಶರ್ಮ ಟ್ರಾವೆಲ್ಸ್ ಬಸ್ ಮತ್ತು ಹುಬ್ಬಳ್ಳಿಯಿಂದ ಉಳವಿಗೆ ಹೊರಟಿದ್ದ ಕಾರ್ ನಡುವೆ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ ಮುಂಭಾಗ ಸಹ ಜಖಂ ಆಗಿದೆ. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೇಹುಬ್ಬಳ್ಳಿ ನಿವಾಸಿ ಜಗದೀಶ ಶೆಟ್ಟಿ(36) ಮೃತಪಟ್ಟವರು. ಕಾರಿನಲ್ಲಿದ್ದ ಮೂವರು ಮಕ್ಕಳು ಮತ್ತು ಮಹಿಳೆ ಗಾಯಗೊಂಡಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ.

 

Swathi MG

Recent Posts

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

6 mins ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

21 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

39 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

57 mins ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

1 hour ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

2 hours ago