ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇರುವ ವಿಮಾನ ಲ್ಯಾಂಡಿಂಗ್ಗೆ ಸಮಸ್ಯೆಯಾಗಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ವಿಮಾನ ತಡವಾಯಿತು ಎಂದರು. ಅರ್ಧ ಗಂಟೆ ಬಳಿಕ ಲ್ಯಾಂಡಿಂಗ್ಗೆ ಕ್ಲಿಯರೆನ್ಸ್ ಸಿಕ್ಕಿದೆ.
ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಇಂಡಿಗೋ ವಿಮಾಣದಲ್ಲಿ ತೆರಳಿದ್ದಾರೆ. ಈ ವೇಳೆ ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಲ್ಯಾಂಡಿಂಗ್ ಗೆ ಸಮಸ್ಯೆಯಾಗಿತ್ತು.
ಇವತ್ತು ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತ ಹಾಕಲು ಶಿಗ್ಗಾಂವಿಗೆ ತೆರಳುತ್ತಿದ್ದೇನೆ. ಕ್ರಿಸಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವ ಬಗ್ಗೆ ಸದ್ಯಕ್ಕೆ ಇನ್ನೂ ತೀರ್ಮಾನ ಮಾಡಿಲ್ಲ ಎಂದರು.