ದೇಶದಲ್ಲಿರುವ ಎಲ್ಲ ಮುಸ್ಲಿಮರು ಕೆಟ್ಟವರು ಎಂಬ ಭಾವನೆ ಸರಿಯಲ್ಲ; ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ”ದೇಶದಲ್ಲಿ ವಾಸಿಸುತ್ತಿರುವ ಎಲ್ಲ ಮುಸ್ಲಿಮರು ಕೆಟ್ಟವರು ಎಂಬ ಭಾವನೆ ಬೆಳೆಸಿಕೊಳ್ಳುವುದು ಸರಿಯಲ್ಲ, 21ನೇ ಶತಮಾನದಲ್ಲಿ ನಾವೆಲ್ಲ ಒಂದಾಗಿ ಬಾಳಬೇಕಾಗಿರುವುದು ಹಾಗೂ ವಿಶೇಷವಾಗಿ ಕೋಮು ಸೌಹಾರ್ದತೆಯಿಂದ ಇರುವುದು ಅವಶ್ಯವಾಗಿದೆ” ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡದ ನುಗ್ಗಿಕೇರಿಯಲ್ಲಿ ಕೆಲ ಸಂಘಟನೆಗಳ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿಗಳ ಮೇಲೆ ಹಲ್ಲೆ ಮಾಡಿ, ಹಣ್ಣು ಇನ್ನಿತರ ಅಂಗಡಿಗಳಿಗೆ ಹಾನಿಪಡಿಸಿರುವುದು ಸರಿಯಲ್ಲ. ಇಸ್ಲಾಂ ಮೂಲಭೂತವಾದಿಗಳು ಹಾಗೂ ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಹಾಗೂ ದೇಶಪರ ನಿಷ್ಠೆ ಹೊಂದಿಲ್ಲದಂತಹ ಸಂಘಟನೆ, ವ್ಯಕ್ತಿಗಳ ವಿರುದ್ಧ ಪ್ರಜಾಪ್ರಭುತ್ವ ರೀತಿಯಲ್ಲಿ ವಿರೋಧ ವ್ಯಕ್ತಪಡಿಸಬೇಕು. ಆದರೆ ಹಲ್ಲೆ ಮಾಡುವುದು, ಅಂಗಡಿ-ಮುಗ್ಗಟ್ಟುಗಳಿಗೆ ಹಾನಿ ಮಾಡುವಂತಹ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಇಂಥವರನ್ನು ಯಾವುದೇ ಕಾರಣಕ್ಕೂ ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಅದಕ್ಕೆ ನಾವು ವಿರೋಧಿಯಾಗಿದ್ದೇವೆ. ಎಲ್ಲರೂ ಸಂಯಮದಿಂದ ಇರಬೇಕು. ಕಾಂಗ್ರೆಸ್‌ನ ಮುಖಂಡರು ಸರಕಾರವೇ ಇದಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಬೇಜವಾಬ್ದಾರಿಯುತ ಹೇಳಿಕೆ ಕೊಡುತ್ತಿದ್ದಾರೆ ಎಂದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಯವರು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಈ ಬಗೆಗಿನ ಹಲವು ಸಂಗತಿಗಳು ನನಗೆ ಗೊತ್ತಿಲ್ಲ. ಅದರ ಬಗ್ಗೆ ವಿವರವಾದ ಮಾಹಿತಿ ಕಲೆ ಹಾಕುವೆ ಎಂದು ತಿಳಿಸಿದರು.

Gayathri SG

Recent Posts

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

3 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

8 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

17 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

27 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

41 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

48 mins ago