ಧಾರವಾಡ: ಪೊಲೀಸರ ಕಾರನ್ನು ಕದ್ದ ಕಳ್ಳ ಬಂಧನ

ಧಾರವಾಡ : ಬಹುತೇಕ ಕಳ್ಳರು ಪೊಲೀಸ್ ಠಾಣೆಯ ಸಮೀಪ ಕಳ್ಳತನಕ್ಕೆ ಇಳಿಯೋದಿಲ್ಲ. ಆದರ ಹೊರತಾಗಿ ಬೇರೆ ಬೇರೆ ಜಾಗಗಳಲ್ಲಿ ಕದ್ದು, ಪರಾರಿಯಾಗೋದು ಸಾಮಾನ್ಯ. ಆದ್ರೇ ಈ ಕಳ್ಳ ಮಾತ್ರ ಠಾಣೆಯಲ್ಲಿದ್ದಂತ ಪೊಲೀಸರ ಕಾರನ್ನೇ ಕದ್ದಿದ್ದಾನೆ. ರಾಜಾರೋಷವಾಗಿ ತಾನು ಕದ್ದಂತ ಪೊಲೀಸ್ ಕಾರನ್ನು  ಓಡಿಸಿಕೊಂಡು ಹೋಗಿದ್ದಾನೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿದ್ದಂತ ಪೊಲೀಸರ ಬುಲೆರೋ ಕಾರು ಕದಿಯೋದಕ್ಕೆ ಪ್ಲಾನ್ ಮಾಡಿದ್ದಂತ ಕದೀಮ ಕಳ್ಳ ನಾಗಪ್ಪ, ಅದರಂತೆ ನಿನ್ನೆ ಬೆಳಗಿನ ಜಾವ 4 ಗಂಟೆಗೆ ಕದ್ದಿದ್ದಾನೆ. ಅಲ್ಲಿಂದ ಹಾವೇರಿ ಜಿಲ್ಲೆಯ ಬ್ಯಾಡಗಿಯವರೆಗೆ ಬೆಳಗಾಗೋದ್ರಲ್ಲಿ ಚಲಾಯಿಸಿಕೊಂಡು ಹೋಗಿದ್ದಾನೆ.

ಬೆಳಿಗ್ಗೆ ಪೊಲೀಸ್ ಠಾಣೆ ಆವರಣದ ಮುಂದಿದ್ದಂತ ಬುಲೇರೋ ಕಾರು ಕಾಣದೇ ಇದ್ದಾಗ, ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಕೂಡಲೇ ಎಲ್ಲಾ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದು ಅಲರ್ಟ್ ಆದಂತ ಅಣ್ಣಿಗೇರಿ ಪೊಲೀಸರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಂತ ಕಳ್ಳ ನಾಗಪ್ಪನನ್ನು ಕಾರು ಸಮೇತ ಹಿಡಿದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಜೈಲಿಗಟ್ಟಿದ್ದಾರೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

52 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago