ಧಾರವಾಡ, ಜ. 17 : ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಧಾರವಾಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಾ. ಚೆನ್ನವೀರ ಕಣವಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
93 ವರ್ಷದ ಡಾ. ಚೆನ್ನವೀರ ಕಣವಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಧಾರವವಾಡದ ಎಸ್. ಡಿ. ಎಮ್. ಆಸ್ಪತ್ರೆಗೆ ಜನವರಿ 14ರಂದು ಅವರು ದಾಖಲಾಗಿದ್ದಾರೆ.
ಧಾರವಾಡ ಜಿಲ್ಲಾಡಳಿತ ಭಾನುವಾರ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಪ್ರಕಟಣೆಯಲ್ಲಿ ತಿಳಿಸಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಅಧೀಕ್ಷಕರು ಜಿಲ್ಲಾಧಿಕಾರಿಗಳ ಸಂಪರ್ಕದಲ್ಲಿದ್ದಾರೆ.
ಪ್ರತಿದಿನ ಜಿಲ್ಲಾಧಿಕಾರಿಗಳೆ ಖುದ್ದು ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ. ಡಾ. ಚೆನ್ನವೀರ ಕಣವಿ ಅವರ ಉತ್ತಮ ಚಿಕಿತ್ಸೆಗೆ ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಡಳಿತ ಹೇಳಿದೆ.