News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Photo Credit :

ಹುಬ್ಬಳ್ಳಿ: ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಿಂದು, ಕ್ರಿಶ್ಚಿಯನ್, ಇಸ್ಲಾಂ ಹಾಗೂ ಸಿಖ್ ಧರ್ಮಗಳು ಸಂವಿಧಾನದಲ್ಲಿ ಗುರುತಿಸಲಾಗಿರುವ ಧರ್ಮಗಳಾಗಿದ್ದು, ಅವರ ಪ್ರಾರ್ಥನೆ, ಆಚರಣೆಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಭರವಸೆ ನೀಡಿದ ಮುಖ್ಯಮಂತ್ರಿಗಳು, ಬಡತನದ ದುರುಪಯೋಗ ಪಡೆದು, ಆಸೆ, ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಮತಾಂತರದ ವಿಷಯ ಇಂದಿನದಲ್ಲ, ಈ ಬಗ್ಗೆ ಸ್ವತಂತ್ರದ ನಂತರದಲ್ಲಿ ಬಹಳ ದೊಡ್ಡ ಚರ್ಚೆಯಾಗಿದೆ. ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇವುಗಳನ್ನು ಅವಲೋಕಿಸಿ, ಕಾನೂನು ಜಾರಿಗೆ ತರಬೇಕೆನ್ನುವುದು ಕರ್ನಾಟಕದ ಬಹುತೇಕ ಜನರ ಅಪೇಕ್ಷೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆ ಪರಿಶೀಲನೆ ಮಾಡುತ್ತಿದೆ. ಪರಿಶೀಲನೆಯ ನಂತರ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡನೆಯಾಗಲಿದೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬಹುತೇಕವಾಗಿ ಕಾನೂನು ಇಲಾಖೆ ಕರಡು ಕಾಯ್ದೆಗೆ ಒಪ್ಪಿಗೆ ನೀಡಿದಲ್ಲಿ ಅಧಿವೇಶನದಲ್ಲಿ ವಿಷಯ ಚರ್ಚೆಗೆ ಬರಲಿದೆ ಎಂದರು.

ಮತಾಂತರ ಒಳ್ಳೆಯದಲ್ಲ: ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಬಡವರು, ದೀನದಲಿತರು ಅದಕ್ಕೆ ಒಳಗಾಗಬಾರದು. ಅವರ ಮನೆತನ, ಕುಟುಂಬದಲ್ಲಿ ಬಹಳಷ್ಟು ತೊಂದರೆಯಾಗುವುದರಿಂದ ಮತಾಂತರ ನಿಷೇಧ ಕಾಯ್ದೆಯನ್ನು ತರುವ ಪ್ರಯತ್ನವನ್ನು ನಮ್ಮ ಸರಕಾರ ಮಾಡಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು