News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಮೂರು ಮತ್ತು ನಾಲ್ಕನೇ ರಂಗ ಬಂದರೂ ಬಿಜೆಪಿಗೆ ಸವಾಲೊಡ್ಡಲು ಸಾಧ್ಯವಿಲ್ಲ: ಜಗದೀಶ್ ಶೆಟ್ಟರ್

Hubballi: Jagadish Shettar said that the Congress will decline in the country at present.
Photo Credit :

ಹುಬ್ಬಳ್ಳಿ: ಮೂರು ಮತ್ತು ನಾಲ್ಕನೇ ರಂಗ ಬಂದರೂ ಬಿಜೆಪಿಗೆ ಸವಾಲೊಡ್ಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅವರ ರಾಷ್ಟ್ರೀಯ ನಾಯಕತ್ವ, ಜಗತ್ತಿನ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ.

ಹಾಗಾಗಿ ಮೂರನೇ ರಂಗ ಆದರೂ ಮಾಡಿಕೊಳ್ಳಲಿ, ನಾಲ್ಕನೇ ರಂಗ ಆದರೂ ಮಾಡಿಕೊಳ್ಳಲಿ, ಐದನೇ ರಂಗ ಆದರೂ ಮಾಡಿಕೊಳ್ಳಲಿ ಅದು ಅವರಿಗೆ ಬಿಟ್ಟದ್ದು ಎಂದು ಪರೋಕ್ಷವಾಗಿ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಟಾಂಗ್ ಕೊಟ್ಟರು.
ಬೇರೆ ಬೇರೆ ಪಕ್ಷದವರು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ನಿನ್ನೇ ಜೆಡಿಎಸ್ ವರಿಷ್ಠರ ದೇವೆಗೌಡರ ನೇತೃತ್ವದಲ್ಲಿ ನಡೆದ ತೃತೀಯ ರಂಗ ರಚನೆ ಕುರಿತಂತೆ ನಡೆದ ಚರ್ಚೆ ಕುರಿತು ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಒಂದು ಕಡೆಗೆ ಅವರೇ ರಾಜಕೀಯವಾಗಿ ಆರೋಪ ಮಾಡುತ್ತಾರೆ. ಮತ್ತೊಂದು ಕಡೆಗೆ ಕಾನೂನಿನ ಮೇಲೆ ಗೌರವವಿದೆ. ಕಾನೂನು ರೀತಿ ಹೋರಾಟ ಮಾಡುತ್ತೇನೆ ಎನ್ನುತ್ತಾರೆ.

ಡಿ‌.ಕೆ‌‌‌‌.ಶಿವಕುಮಾರ್ ಅವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ, ಅವರದ್ದು ತಪ್ಪು ಇರಲಿಲ್ಲ ಎಂದಾದರೆ ಕಾನೂನು ಪ್ರಕಾರ ಹೋರಾಟ ಮಾಡಲಿ ಅದು ಬಿಟ್ಟು ಎಲ್ಲದಕ್ಕೂ ರಾಜಕೀಯಕರಣ ಮಾಡೋದಕ್ಕೆ ಹೋಗಬೇಡಿ ಎಂದು ಹರಿಹಾಯ್ದರು.

ಹು-ಧಾ ಮೇಯರ್ ಉಪಮೇಯರ್ ಚುನಾವಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಇಂದು ಸಂಜೆ ಸಭೆ ಕರೆಯಲಾಗಿದೆ. ಅಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮೇಯರ್ ಉಪಮೇಯರ್ ಆಯ್ಕೆ ಮಾಡಲಾಗುವುದು ಎಂದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು