News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ರಾಜ್ಯಸಭೆ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಮಾತನಾಡಿಲ್ಲ: ಎಚ್ಡಿಕೆ

BJP is looting people's money in the name of development: HDK
Photo Credit :

ಹುಬ್ಬಳ್ಳಿ: ರಾಜ್ಯಸಭೆ ಚುನಾವಣೆಗೆ ನಾಲ್ಕನೇ ಅಭ್ಯರ್ಥಿ ಆಯ್ಕೆ ‌ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವ ನಾಯಕರೊಂದಿಗೂ ನಾನು ಮಾತನಾಡಿಲ್ಲ. ಇದೆಲ್ಲ ವದಂತಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಗುನ್ನಾ, ತಳಮಳ ಎಂಬ ಚರ್ಚೆಗಳಾಗುತ್ತಿವೆ.

ಆದರೆ ಯಾವುದೇ ರೀತಿಯ ತಳಮಳ, ನಡುಕ ಪಕ್ಷಕ್ಕಿಲ್ಲ. ಅದಕ್ಕಾಗಿಯೇ ನಾನು ರಾಜ್ಯಸಭಾ ಚುನಾವಣೆ ಜಂಜಾಟದಿಂದ ದೂರ ಉಳಿದಿದ್ದೆ. ಆದರೆ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವನ್ನು ಅವಮಾನ ಮಾಡಲು ಹಲವಾರು ಹೇಳಿಕೆ ಕೊಡುತ್ತಿದ್ದಾರೆ. ಪಕ್ಷವನ್ನು ನಿರ್ನಾಮ ಮಾಡುವ ಕೆಲಸ ಮಾಡಲಾಗುತ್ತಿದೆ. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರರಂತಹ ನೂರಾರು ಜನರು ಬಂದರು ಅದು ಸಾಧ್ಯವಿಲ್ಲ ಎಂದರು.

ರಾಜಕಾರಣದಲ್ಲಿ ಆಶಾವಾದ ಇರಬೇಕು. ಹಾಗಾಗಿ ನಮ್ಮ ಪಕ್ಷದಿಂದ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ನಿಲ್ಲಿಸಿದ್ದೇವೆ. ನಮ್ಮಲ್ಲಿ 32 ಮತಗಳಿವೆ. 3-4 ಜನರಲ್ಲಿ ಅಸಮಾಧಾನ ಇರುವುದು ನಿಜ, ಅವರನ್ನು ವಿಶ್ವಾಸಕ್ಕೆ ಪಡೆಯುವ ಕೆಲಸ ನಡೆಯುತ್ತಿದೆ. ಎಲ್ಲರ ಮತಗಳು ಪಕ್ಷದ ಅಭ್ಯರ್ಥಿಗಳ ಪರ ಬೀಳಲಿವೆ. ಈ ಬಾರಿ ಅಡ್ಡ ಮತಗಳು ಬರುವುದು ಸಾಧ್ಯವಿಲ್ಲ ಎಂದರು.

ಇದುವರೆಗೆ ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ ಟೀಮ್ ಎಂದು ಆರೋಪಿಸಲಾಗುತ್ತಿತ್ತು. ಆದರೆ ಬರುವ ಜು. 10ರ ರಾಜ್ಯಸಭೆಯ ಫಲಿತಾಂಶದ ನಂತರ ಯಾರು ಬಿಜೆಪಿಯ ಬಿ ಟೀಮ್ ಹಾಗೂ ನಾಯಕ ಯಾರೆಂದು ಗೊತ್ತಾಗುತ್ತದೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಬಹುದು ಎಂದು ತಿಳಿದು ಕೊಂಡಿದ್ದಾರೆ. ಆದರೆ ಅವರೇ ತಮ್ಮ ಕಲ್ಲನ್ನು ತಾವೇ ಹೊಡೆದುಕೊಳ್ಳುತ್ತಾರೆ ನೋಡಿ ಎಂದರು.

ನನಗೆ ರಾಜ್ಯಸಭೆ ಚುನಾವಣೆ ಮುಖ್ಯವಲ್ಲ. ಮುಂಬರುವ 2023ರ ಚುನಾವಣೆಯಲ್ಲಿ 123 ಸ್ಥಾನಗಳ ಗುರಿ ಹೊಂದಿದ್ದು, ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಮುಂದಿನ 8-10 ತಿಂಗಳು ಸಂಚರಿಸಿ ಪಕ್ಷ ಸಂಘಟಿಸುವೆ. ಪಕ್ಷವು ಅಧಿಕಾರಕ್ಕೆ ಬರುವುದು ನಿಶ್ಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು