ಹುಬ್ಬಳ್ಳಿ: ಕರ್ನಾಟಕದ ಹುಬ್ಬಳ್ಳಿ ನಗರದ ಹೊರವಲಯದಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಎಂಟು ಜನ ಸಾವನ್ನಪ್ಪಿದ್ದು, ಒಟ್ಟು 26 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್ ಬಸ್ಗೆ ಮಧ್ಯರಾತ್ರಿ 12:30 ರಿಂದ 1 ರ ನಡುವೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ನಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಲಾಬೂರಾವ್ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.
ಪರಿಣಾಮ ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿದಂತೆ ಮೂವರು, ನ್ಯಾಷನಲ್ ಟ್ರಾವೆಲ್ಸ್ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಅಪಘಾತದಿಂದ ನಜ್ಜುಗುಜ್ಜಾಗಿರುವ ಎರಡೂ ವಾಹನಗಳನ್ನು ಪೊಲೀಸರು ತೆರವುಗೊಳಿಸಿ, ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.
ಸರಣಿ ಅಪಘಾತದಿಂದ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಮುಂದೆ ಚಲಿಸುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಬಂದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…