ಶೀಘ್ರದಲ್ಲೇ ಪರಿಷ್ಕೃತ ಪಠ್ಯಪುಸ್ತಕ ಪೂರೈಕೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಧಾರವಾಡ: ಪಠ್ಯಪುಸ್ತಕದಲ್ಲಿರುವ ತಪ್ಪುಗಳನ್ನು ಒಪ್ಪಿಕೊಳ್ಳುತ್ತೇವೆ ಅದರಲ್ಲಿರುವ ಲೋಪದೋಷ ಸರಿಪಡಿಸಿ, ಶೀಘ್ರದಲ್ಲೇ ಪರಿಷ್ಕೃತ ಪಠ್ಯಪುಸ್ತಕ ಪೂರೈಕೆ ಮಾಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ಮಾಡುವಾಗ ದೊಡ್ಡ ತಪ್ಪು ಮಾಡಬಾರದು. ಇಂಥದ್ದೊಂದು ಜವಾಬ್ದಾರಿ ಸಿಕ್ಕಾಗ ಅತ್ಯಂತ ಜಾಗರೂಕರಾಗಿ ಕೆಲಸ ಮಾಡಬೇಕು. ಈಗಾಗಲೇ ಆಗಿರುವ ತಪ್ಪನ್ನು ಗಮನಿಸಿ ಅದರ ಮರು ಪರಿಷ್ಕರಣೆಗೆ ನಾವು ಮುಂದಾಗಿದ್ದೇವೆ.

ಬಸವಣ್ಣನ ಪಠ್ಯದಲ್ಲಿ ಹಲವಾರು ಹೊಸ ವಿಚಾರಗಳನ್ನು ಸೇರಿಸಲಾಗಿದೆ. ಈ ರೀತಿಯ ಲೋಪಗಳನ್ನು ಕಂಡು ಹಿಡಿದು ನಮ್ಮ ಗಮನಕ್ಕೆ ತಂದರೆ ನಾವು ಕೂಡಲೇ ಅದನ್ನು ಸರಿಪಡಿಸುತ್ತೇವೆ. ಸದ್ಯ ನಡೆಯುತ್ತಿರುವ ವಾದ-ವಿವಾದಗಳು ಮಕ್ಕಳ ಮೇಲೆ ಪರಿಣಾಮ ಬೀರುವುದು ಬೇಡ. ಹೀಗಾಗಿ ಪಠ್ಯದಲ್ಲಾದ ತಪ್ಪುಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಪಠ್ಯದಲ್ಲಿ ಯಾವುದೇ ಸಾಹಿತಿಗಳನ್ನು ನಾವು ಕಡೆಗಣಿಸಿಲ್ಲ. ಕಾಂಗ್ರೆಸ್ ಅವಧಿಯಲ್ಲಿ ಮಹರಾಜರ ಕಥೆಗಳನ್ನು ತೆಗೆದು ಟಿಪ್ಪು ಸುಲ್ತಾನ್ ಕಥೆ ಹಾಕಲಾಗಿತ್ತು. ಸಿಂಧೂ ಸಂಸ್ಕೃತಿ ಕಿತ್ತು ಹಾಕಿ ನೆಹರೂ ಪಾಠ ಹಾಕಲಾಗಿತ್ತು. ಇಸ್ಲಾಂ ಮತ್ತು ಕ್ರೈಸ್ತರನ್ನು ಮಾತ್ರ ಪುಸ್ತಕದಲ್ಲಿ ತರಲಾಗಿತ್ತು. ಇಂತಹ ನೂರು ಉದಾಹರಣೆಗಳಿವೆ. ದೇವನೂರು ಮಹಾದೇವನವರು ಪಠ್ಯದಲ್ಲಿ ತಪ್ಪುಗಳಾಗಿದ್ದನ್ನು ಮೊದಲೇ ನಮಗೆ ಹೇಳಬಹುದಿತ್ತು. ಆದರೆ, ಪುಸ್ತಕ ಬಿಡುಗಡೆಯಾದ ಮೇಲೆ ಹೇಳಿದ್ದು ನೋವಾಗಿದೆ. ಬರಗೂರು ರಾಮಚಂದ್ರಪ್ಪನವರ ಕಾಲದಲ್ಲೂ ಪಠ್ಯದಲ್ಲಿ ತಪ್ಪುಗಳಾಗಿದ್ದವು. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ನಾಡಗೀತೆಗೆ ಅವಮಾನ ಮಾಡಲಾಗಿತ್ತು ಎಂದರು.

Sneha Gowda

Recent Posts

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

10 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

21 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

32 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

42 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

54 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

1 hour ago