News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾರ್ಯಕಾರಣಿಯಲ್ಲಿ ಚರ್ಚೆ ನಡೆಸಲಾಗಿಲ್ಲ: ಪ್ರಹ್ಲಾದ್ ಜೋಶಿ

Pralhad Joshi 03092021
Photo Credit :

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾರ್ಯಕಾರಣಿಯಲ್ಲಿ ಚರ್ಚೆ ನಡೆಸಲಾಗಿಲ್ಲ. ಇದರ ಬಗ್ಗೆ ವರಿಷ್ಠರೊಂದಿಗೆ ಮುಖ್ಯಮಂತ್ರಿಯವರು ಚರ್ಚೆ ನಡೆಸುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹಲವು ಬಾರಿ ನಾನು ಹೇಳಿದ್ದೇನೆ. 2023 ರ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಅಂಶಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮತಾಂತರ ನಿಷೇಧ ಕಾಯ್ದೆಜಾರಿಗೊಳಿಸಿದ್ದಕ್ಕೆ ಸಿಎಂಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಪರಿಷತ್ ನಲ್ಲಿಯೂ ಮತಾಂತರ ನಿಷೇಧ ಕಾಯ್ದೆ ಮಂಡಿಸಲಾಗುವುದು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸಂಪುಟ ವಿಸ್ತರಣೆಯ ಕುರಿತಾಗಿ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ನಡೆದಿಲ್ಲ. ವರಿಷ್ಠರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಅದರ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು