ಹುಬ್ಬಳ್ಳಿ-ಧಾರವಾಡ

ಸರ್ಕಾರಕ್ಕೆ ದಮ್‌ ಇದ್ದರೆ ಶಾಂತಿ ಕದಡುವ ಸಂಘಟನೆಗಳನ್ನು ನಿಷೇಧಿಸಲಿ; ಸಿದ್ದರಾಮಯ್ಯ

ಹುಬ್ಬಳ್ಳಿ: ಗಲಭೆ ಹಿಂದೆ ಸಂಘಟನೆಗಳ ಕೈವಾಡವಿದ್ದರೆ ಅವುಗಳ ಮೇಲೆ ರಾಜ್ಯ ಸರ್ಕಾರ ನಿಷೇಧ ಹೇರಲಿ, ಬೇಡ ಎಂದವರು ಯಾರು? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಬಾದಾಮಿಗೆ ತೆರಳುವ ಮುನ್ನ ಶುಕ್ರವಾರ ಇಲ್ಲಿನ ವಿಮಾನನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸರ್ಕಾರಕ್ಕೆ ದಮ್‌ ಇದ್ದರೆ ಶಾಂತಿ ಕದಡುವ ಸಂಘಟನೆಗಳನ್ನು ನಿಷೇಧಿಸಬೇಕು.

ಎಸ್‌ಡಿಪಿಐ, ಆರ್‌ಎಸ್‌ಎಸ್, ಬಜರಂಗಳ, ಎಐಎಂಐಎಂಗಳನ್ನು ನಿಷೇಧ ಮಾಡಿ’ ಎಂದರು.

ರಾಜೀನಾಮೆ ಕೊಡಲಿ: ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹಸಚಿವ ಆರಗ ಜ್ಞಾನೇಂದ್ರ ಮೇಲಿಂದ ಮೇಲೆ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಗೃಹ ಇಲಾಖೆಯ ಕೆಲಸ. ಆದರೆ, ಆ ಇಲಾಖೆ ಸಚಿವರೇ ಸಮಾಜದ ಶಾಂತಿ ಭಂಗ ಮಾಡುತ್ತಿದ್ದಾರೆ. ಅವರು ರಾಜೀನಾಮೆ ಕೊಟ್ಟು ಹೋಗಲಿ ಎಂದು ಒತ್ತಾಯಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಯಾರೊ ಒಬ್ಬರು ತಪ್ಪು ಮಾಡಿದ್ದಾರೆ ಎಂದಾಕ್ಷಣ ಎಲ್ಲರನ್ನೂ ಒಂದೇ ರೀತಿ ನೋಡುವುದು ಸರಿಯಲ್ಲ. ಎಲ್ಲಾ ತಪ್ಪಿತಸ್ಥರಿಗೂ ಶಿಕ್ಷೆಯಾಗಬೇಕು. ನಿರಪರಾಧಿಗಳ ಮೇಲೆ ಕ್ರಮ ಕೈಗೊಳ್ಳಬೇಡಿ’ ಎಂದರು.

ಕರ್ನಾಟಕದಲ್ಲಿಯೂ ಸರ್ಕಾರ ರಚಿಸುವ ಕುರಿತು ಅರವಿಂದ ಕೇಜ್ರಿವಾಲ್‌ ಹೇಳಿಕೆಗೆ ಪ್ರತಿಕ್ರಿಯಿಸಿ ‘ಆಮ್‌ ಆದ್ಮಿ ಕೂಡ ರಾಜಕೀಯ ಪಕ್ಷ. ಯಾರಿಗೆ ಅಧಿಕಾರ ಕೊಡಬೇಕು ಎನ್ನುವುದನ್ನು ಜನರು ತೀರ್ಮಾನಿಸುತ್ತಾರೆ’. ಪ್ರಶಾಂತ ಕಿಶೋರ ಕಾಂಗ್ರೆಸ್‌ಗೆ ಬರುತ್ತಿರುವ ವಿಷಯ ನನಗೆ ಗೊತ್ತಿಲ್ಲ ಎಂದರು.

ಪಿಎಸ್‌ಐ ನೇಮಕಾತಿ ಅಕ್ರಮ ಕುರಿತು ‘ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಬಿಜೆಪಿಯ ದಿವ್ಯಾ ಹಾಗರಗಿಯನ್ನು ಕೂಡಲೇ ಬಂಧಿಸಬೇಕು. ಕೆಲವರಿಗೆ ಬಹಳಷ್ಟು ಅನ್ಯಾಯವಾಗಿದೆ’ ಎಂದು ಹೇಳಿದರು.

Gayathri SG

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

4 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

33 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

50 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago