ಹುಬ್ಬಳ್ಳಿ : ಸರ್ಕಾರಿ ಕಚೇರಿಯ ಸಿಬ್ಬಂದಿ ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆದುಕೊಂಡೇ ಕಚೇರಿಗೆ ಹಾಜರಾಗಬೇಕು, 2 ಡೋಸ್ ಲಸಿಕೆ ಪಡೆಯುವಂತೆ ಈಗಾಗಲೇ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಚೇರಿಯ ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯುವಂತೆ ಈಗಾಗಲೇ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳ ಸಿಬ್ಬಂದಿಗೂ ಈ ಮಾರ್ಗಸೂಚಿ ಪಾಲಿಸಲು ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಆರೋಗ್ಯ ಕಾರ್ಯಕರ್ತರಿಗೆ ಮತ್ತು ವಯೋಸಹಜ ಕಾಯಿಲೆಗಳಿರುವ 60 ವರ್ಷ ಮೇಲ್ಪಟ್ಟವರಿಗೆ ಜನವರಿ 10 ರ ನಂತರ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.